HomeKarnatakaBIG NEWS: ಬೆಲೆ ಏರಿಕೆ ಮಾಡಿ ಉದ್ಧಟನತದ ಉತ್ತರ ಕೊಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ ಆಕ್ರೋಶ

BIG NEWS: ಬೆಲೆ ಏರಿಕೆ ಮಾಡಿ ಉದ್ಧಟನತದ ಉತ್ತರ ಕೊಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಬೆಲೆ ಏರಿಕೆ ಪರ್ವ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಮೇಲೆ ಬರೆ ಎಳೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಕಳೆದ ವಾರ ಸಿಎಂ ಸಿದ್ದರಾಮಯ್ಯ ಪೆಟ್ರೋಲ್, ಡೀಸೆಲ್ ದರ ಏರಿಸಿದ್ದರು. ಈಗ ಹಾಲಿನ ದರ ಏರಿಸಿದ್ದಾರೆ. ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆಗಳೆಲ್ಲವೂ ಏರಿಕೆಯಾಗಿದೆ. ನಾವು ಇದನ್ನು ಪ್ರಶ್ನೆ ಮಾಡಿದರೆ ಉದ್ಧಟತನದ ಉತ್ತರ ಕೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾರಂಟಿ ಘೋಷಣೆ ಮಡಿ ಈಗ ಬೆಲೆ ಏರಿಕೆ ಮಾಡುತ್ತಿದ್ದಾರೆ. ಎಲ್ಲಾ ವಸ್ತುಗಳ ಬೆಲೆ ಗಗನಮುಖಿಯಾಗಿದೆ. ಸಿಎಂ ಸಿದ್ದರಾಮಯ್ಯ ಯಾಕಿಷ್ಟು ಕಟುವಾಗಿ ನಡೆದುಕೊಳ್ಳುತ್ತಿದ್ದಾರೆ ಗೊತ್ತಿಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹೆಸರಿಗೆ ಕೊಕ್ ವಿಚಾರವಾಗಿ ಕಿಡಿಕಾರಿದ ವಿಜಯೇಂದ್ರ, ಷಡ್ಯಂತ್ರ ನಾಯಕರಾಗಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular