
ತುಮಕೂರು: ತುಮಕೂರು ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲ ಭೇದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಎಸ್ಪಿ ಅಶೋಕ್ ಕೆ. ವೆಂಕಟ್ ಪ್ರತಿಕ್ರಿಯೆ ನೀಡಿದ್ದಾರೆ.
ಮಕ್ಕಳ ಮಾರಾಟ ಜಾಲ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಬಂಧಿತ ಆರೋಪಿಗಳು ಖಾಸಗಿ ನರ್ಸಿಂಗ್ ಹೋಮ್, ಖಾಸಗಿ ಆಸ್ಪತ್ರೆ, ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಕೆಲವು ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆಯೂ ಕಣ್ಣಿಟ್ಟಿದ್ದೇವೆ. ಆರೋಪಿಗಳ ಜೊತೆಗೆ ನಂಟು ಹೊಂದಿರುವ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ನಿಗಾ ವಹಿಸಲಾಗಿದೆ. ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.