ಬೆಂಗಳೂರು : ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ಈ ಹಿನ್ನೆಲೆ ರಾಜ್ಯದ ಕೆಲವು ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಸಂಜೆಯಿಂದ ಮಳೆ ತೀವ್ರಗೊಂಡ ಹಿನ್ನೆಲೆ ಜಿಲ್ಲೆಯ ವಿರಾಜಪೇಟೆ ಮತ್ತು ಪೊನ್ನಂಪೇಟೆ ಸೇರಿ ಮೂರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು, ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ.
ಮಳೆಯಿಂದಾಗಿ ಜಿಲ್ಲೆಯ ನದಿ ತೊರೆಗಳು ತುಂಬಲಾರಂಭಿಸಿವೆ, ಹಲವು ಕಡೆ ಮನೆ ಗೋಡೆಗಳು ಕುಸಿದು ಅವಘಡಗಳು ಸಂಭವಿಸಿದೆ . ದಕ್ಷಿಣ ಕನ್ನಡ ಜಿಲ್ಲೆ. ಕೊಡಗು, ಚಿಕ್ಕಮಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದೆ.