ಬೆಂಗಳೂರು : ರಾಜ್ಯದಲ್ಲಿ ಮುಂದಿನ 4 ದಿನ ರಣಭೀಕರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹೌದು, ರಾಜ್ಯದ ಹಲವು ಕಡೆ ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ನದಿ ಹಳ್ಳಗಳು ಉಕ್ಕಿ ಹರಿಯುತ್ತಿದೆ. ಮಲೆನಾಡಿನಲ್ಲಂತೂ ಮಳೆ ಆರ್ಭಟ ಜೋರಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಕೊಡಗು,ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗೂ ಬೆಳಗಾವಿ, , ಹಾಸನ, ಮೈಸೂರು , ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.