BREAKING : ‘ಲೈಂಗಿಕ ದೌರ್ಜನ್ಯ’ಕ್ಕೆ ಬೇಸತ್ತು ಬೀದರ್ –ಕೋಲಾರ D.C ಕಚೇರಿಗೆ 13 ವರ್ಷದ ಬಾಲಕಿಯಿಂದ ಬಾಂಬ್ ಬೆದರಿಕೆ ಇಮೇಲ್.!

ಕೋಲಾರ : ಲೈಂಗಿಕ ದೌರ್ಜನ್ಯಕ್ಕೆ ಬೇಸತ್ತು 13 ವರ್ಷದ ಬಾಲಕಿ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ-ಇಮೇಲ್ ಕಳುಹಿಸಿದ ಘಟನೆ ನಡೆದಿದೆ.

ಬೀದರ್ ಮತ್ತು ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ 5 ಆರ್ ಡಿಎಕ್ಸ್ ಬಾಂಬ್ ಇಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮೇಲ್ ಬಂದಿತ್ತು, ಇದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ನಂತರ ಪರಿಶೀಲನೆ ನಡೆಸಿದಾಗ ತಮಿಳುನಾಡು ಮೂಲದ 13 ವರ್ಷದ ಬಾಲಕಿ ಬಾಂಬ್ ಬೆದರಿಕೆ ಕಳುಹಿಸಿದ್ದಾಳೆ ಎಂದು ತಿಳಿದು ಬಂದಿದೆ. ಮೊದಲು ಮೇಲ್ ನಲ್ಲಿ ಬಾಂಬ್ ಬೆದರಿಕೆ ಇಮೇಲ್ ನಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಪ್ರಸ್ತಾಪ ಮಾಡಿ ನಂತರ ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಪ್ರಸ್ತಾಪ ಮಾಡಿದ್ದಾಳೆ. ಈ ಬಗ್ಗೆ ಕೋಲಾರ, ಬೀದರ್ ಡಿಸಿ ಕಚೇರಿ ಅಧಿಕಾರಿಗಳು, ಪೊಲೀಸರು ಪರಿಶೀಲನೆ ನಡೆಸಿದಾಗ ಇದು ಹುಸಿ ಬಾಂಬ್ ಇಮೇಲ್ ಎಂದು ಧೃಡವಾಗಿದೆ.

ನಂತರ ಬಾಂಬ್ ನಿಷ್ಕ್ರಿಯ ದಳ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ನಂತರ ಎಲ್ಲರೂ ನಿರಾಳರಾದರು. ಆದರೆ ಬಾಲಕಿ ಲೈಂಗಿಕ ದೌರ್ಜನ್ಯದ ಬಗ್ಗೆ ಪ್ರಸ್ತಾಪ ಮಾಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಚೆನ್ನೈನಲ್ಲಿ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ಬಾಲಕಿ ಇಮೇಲ್ ನಲ್ಲಿ ಪ್ರಸ್ತಾಪಿಸಿದ್ದಳು ಎನ್ನಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read