
ನಗರದ ಪೇಟೆಚಾಮನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಹತ್ಯೆ ನಡೆದಿದೆ. ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕನ ಬಟ್ಟೆ ಬಿಚ್ಚಿಸಿ ಕಿರುಕುಳ ನೀಡಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕೊಲೆಯಾದ ಯುವಕನನ್ನು ಕಾರ್ತಿಕ್ ಸಿಂಗ್ (17) ಎಂದು ಗುರುತಿಸಲಾಗಿದೆ. ಬಾಲಕನ ಮೇಲೆ ಲಾಂಗು ಮಚ್ಚುಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

