ನಡು ರಸ್ತೆಯಲ್ಲೇ 17 ವರ್ಷದ ಬಾಲಕಿಗೆ ‘ಲೈಂಗಿಕ ಕಿರುಕುಳ’ : ನರಳಾಡಿ ಪ್ರಾಣ ಬಿಟ್ಟ ವಿದ್ಯಾರ್ಥಿನಿ

ಕಾಲೇಜು ಮುಗಿಸಿ ಬೈಸಿಕಲ್ ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಬಾಲಕಿಗೆ ಕಿರಾತಕರು ಲೈಂಗಿಕ ಕಿರುಕುಳ ನೀಡಿದ್ದು, ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಬೈಕ್ ವಿದ್ಯಾರ್ಥಿಯ ಮೇಲೆ ಹರಿದಿದೆ. ಅಪಘಾತದಲ್ಲಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ . ಶಾಲಾ ಬಾಲಕಿಗೆ ದುಷ್ಕರ್ಮಿಗಳು ಕಿರುಕುಳ ನೀಡುತ್ತಿರುವ ಈ ಲೈವ್ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಬಾಲಕರ ಗುಂಪೊಂದು ದುಪಟ್ಟಾವನ್ನು ಕಸಿದುಕೊಂಡು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಶಾಲೆಗೆ ಹೋಗುತ್ತಿದ್ದ ಬಾಲಕಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿ ಶುಕ್ರವಾರ ನಡೆದಿದೆ.
ಘಟನೆ ನಡೆದ ಒಂದು ದಿನದ ನಂತರ ಕಿರುಕುಳ ನೀಡಿದವರಿಗೆ ಯುಪಿ ಪೊಲೀಸರು ಶನಿವಾರ ಗುಂಡಿಕ್ಕಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ಪೊಲೀಸರು ಬರುತ್ತಿದ್ದಂತೆ ಆರೋಪಿಗಳು ಘಟನಾ ಸ್ಥಳದಿಂದ ಪರಾರಿಯಾಗುತ್ತಿದ್ದರು ಎಂದು ವರದಿಯಾಗಿದೆ.

ಅವರನ್ನು ಬಂಧಿಸುವ ಪ್ರಯತ್ನದಲ್ಲಿ ಅಧಿಕಾರಿಗಳು ಅವರಲ್ಲಿ ಇಬ್ಬರ ಕಾಲಿಗೆ ಗುಂಡು ಹಾರಿಸಿದ್ದಾರೆ. ಮೂರನೇ ಆರೋಪಿ ಅಪ್ರಾಪ್ತ ವಯಸ್ಕನಾಗಿದ್ದು, ಕಾಲು ಮುರಿದಿದಿ ಎಂದು ಹೇಳಲಾಗಿದೆ. ಗಾಯಗೊಂಡ ಆರೋಪಿಗಳನ್ನು ಪೊಲೀಸ್ ಅಧಿಕಾರಿಗಳು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ವೈರಲ್ ಆಗಿದೆ.

ಏನಿದು ಘಟನೆ

17 ವರ್ಷದ ಬಾಲಕಿ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಹನ್ಸ್ವಾರ್ ಪೊಲೀಸ್ ಠಾಣೆ ಪ್ರದೇಶದ ಶಹಬಾಜ್ ಮತ್ತು ಅವನ ಸಹೋದರ ಅರ್ಬಾಜ್ ಎಂಬ ದುಷ್ಕರ್ಮಿಗಳು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಶಹಬಾಜ್ ಮತ್ತು ಅರ್ಬಾಜ್ ಮೋಟಾರ್ ಸೈಕಲ್ ಸವಾರಿ ಮಾಡುತ್ತಿದ್ದರು ಮತ್ತು ಅವಳನ್ನು ಗೇಲಿ ಮಾಡಲು ಶುರು ಮಾಡಿದ್ದಾರೆ. ಅಲ್ಲದೇ ಅವಳ ದುಪಟ್ಟಾವನ್ನು ಎಳೆದರು ಎಂದು ಆರೋಪಿಸಲಾಗಿದೆ. ಹುಡುಗಿ ತನ್ನ ದುಪಟ್ಟಾವನ್ನು ಹಿಂದಕ್ಕೆ ಎಳೆಯಲು ಪ್ರಯತ್ನಿಸಿದಾಗ ರಸ್ತೆಗೆ ಬಿದ್ದಿದ್ದಾಳೆ.

ಅದೇ ಸಮಯದಲ್ಲಿ, ಫೈಸಲ್ ಎಂದು ಗುರುತಿಸಲ್ಪಟ್ಟ ಇನ್ನೊಬ್ಬ ಯುವಕ ತನ್ನ ಮೋಟಾರ್ಸೈಕಲ್ ಅನ್ನು ಅವಳ ತಲೆಯ ಮೇಲೆ ಹರಿಸಿದ್ದಾನೆ. ಪರಿಣಾಮ ಬಾಲಕಿ ದವಡೆ ಮುರಿದಿದ್ದು, ತಲೆಗೆ ತೀವ್ರವಾದ ಗಾಯಗಳಾಗಿವೆ ಮತ್ತು ರಕ್ತಸ್ರಾವದಿಂದ ಆಕೆ ಮೃತಪಟ್ಟಿದ್ದಾಳೆ.

ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪೊಲೀಸರು ಕ್ರಮ ಕೈಗೊಂಡು ಮೂವರು ಆರೋಪಿಗಳಾದ ಮೊಹಮ್ಮದ್ ಫೈಸಲ್, ಶಹಬಾಜ್ ಮತ್ತು ಅರ್ಬಾಜ್ ಅವರನ್ನು ಶನಿವಾರ ಬಂಧಿಸಿದ್ದಾರೆ.
ಕೂಡಲೇ ಪ್ರಯಾಣಿಕರು ಸಂತ್ರಸ್ತೆಯನ್ನು ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿ ಆಕೆ ಮೃತಪಟ್ಟಿದ್ದಾರೆ. ಮೂವರು ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಮತ್ತು ಅವರನ್ನು ಬಂಧಿಸಿದ್ದಾರೆ ಎಂದು ಅಂಬೇಡ್ಕರ್ ನಗರದ ಪೊಲೀಸ್ ವರಿಷ್ಠಾಧಿಕಾರಿ ಅಜಿತ್ ಕುಮಾರ್ ಸಿನ್ಹಾ ಶುಕ್ರವಾರ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read