HomeLatest Newsನರೇಗಾ ಕೂಲಿ ಕಾರ್ಮಿಕರಿಗೆ ಗುಡ್ ನ್ಯೂಸ್: ಕೆಲಸದ ಪ್ರಮಾಣದಲ್ಲಿ ಶೇ. 30ರಷ್ಟು ರಿಯಾಯಿತಿ ಘೋಷಣೆ

ನರೇಗಾ ಕೂಲಿ ಕಾರ್ಮಿಕರಿಗೆ ಗುಡ್ ನ್ಯೂಸ್: ಕೆಲಸದ ಪ್ರಮಾಣದಲ್ಲಿ ಶೇ. 30ರಷ್ಟು ರಿಯಾಯಿತಿ ಘೋಷಣೆ

ಬೆಂಗಳೂರು: ನರೇಗಾ ಯೋಜನೆಡಿ ಕೂಲಿ ಕೆಲಸ ಮಾಡುವ ಕಾರ್ಮಿಕರ ಕೆಲಸದ ಪ್ರಮಾಣದಲ್ಲಿ ಶೇಕಡ 30ರಷ್ಟು ರಿಯಾಯಿತಿ ಘೋಷಿಸಲಾಗಿದೆ.

ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗದ ನರೇಗಾ ಕಾರ್ಮಿಕರಿಗೆ ಏಪ್ರಿಲ್ ಮತ್ತು ಮೇ ನಲ್ಲಿ ಕೆಲಸದ ಪ್ರಮಾಣದಲ್ಲಿ ಶೇಕಡ 30ರಷ್ಟು ರಿಯಾಯಿತಿ ಘೋಷಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚಿನ ತಾಪಮಾನ ಇದೆ. ಕಾರ್ಮಿಕರ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಪ್ಪಿಸಲು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಘೋಷಿಸಲಾಗಿದೆ. ಬಿಳಿ ಬಣ್ಣದ ಸಡಿಲವಾದ ಖಾದಿ ಬಟ್ಟೆಗಳನ್ನು ತಲೆಯ ಮೇಲೆ ಬಿಳಿ ರುಮಾಲು ಧರಿಸಿ ಕೆಲಸ ಮಾಡಬೇಕು ಎಂದು ಸಚಿವರು ಸಲಹೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular