SHOCKING : ಯಾದಗಿರಿಯಲ್ಲಿ ಆ‍ಘಾತಕಾರಿ ಘಟನೆ : ವಸತಿ ಶಾಲೆಯ ಶೌಚಾಲಯದಲ್ಲೇ 9ನೇ ತರಗತಿ ವಿದ್ಯಾರ್ಥಿನಿಗೆ ಹೆರಿಗೆ.!

ಯಾದಗಿರಿ : ಜಿಲ್ಲೆಯ ಶಹಾಪುರ ನಗರದ ವಸತಿ ಶಾಲೆಯ ಶೌಚಾಲಯದಲ್ಲೇ 9ನೇ ತರಗತಿ ವಿದ್ಯಾರ್ಥಿನಿಗೆ ಹೆರಿಗೆಯಾದ ಘಟನೆ ನಡೆದಿದೆ.

ಘಟನೆ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ನಗರದ ವಸತಿ ಶಾಲೆಯ ಶೌಚಾಲಯದಲ್ಲಿ ಈ ಘಟನೆ ನಡೆದಿದೆ. ಬಾಲಕಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಶಾಲೆಯ ಶೌಚಾಲಯದಲ್ಲೇ ಬಾಲಕಿಗೆ ಹೆರಿಗೆ ಆಗಿದೆ ಎನ್ನಲಾಗಿದೆ. ಬಾಲಕಿಗೆ ಶೌಚಾಲಯದಲ್ಲೇ ಹೆರಿಗೆ ಆಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.  ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಗೆ ಹೆರಿಗೆಯಾದ ಸುದ್ದಿ ತಿಳಿದು ತಕ್ಷಣವೇ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿದ್ಯಾರ್ಥಿನಿ ಗರ್ಭ ಧರಿಸಲು ಕಾರಣ ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವಿದ್ಯಾರ್ಥಿನಿ ಕೂಡ ಈ ಬಗ್ಗೆ ವಿಚಾರ ನಮ್ಮ ಬಳಿ ಹೇಳುತ್ತಿಲ್ಲ ಎಂದು ಶಾಲೆಯ ಮೇಲ್ವಿಚಾರಕಿ ಹೇಳಿದ್ದಾರೆ. ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read