ಹಾಸನ : ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಬಿಜೆಪಿ ಶಾಸಕ ಎಸ್ .ಆರ್ ವಿಶ್ವನಾಥ್ ಹೇಳಿದರು.
ಹಾಸನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆಯುತ್ತಿದೆ, ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ. ಸರ್ಕಾರ ಕೊಡುವ ಶಿಕ್ಷೆ ಬೇರೆ, ದೇವರು ಕೊಡುವ ಶಿಕ್ಷೆ ಬೇರೆ ಎಂದರು.
ಅನಾಮಿಕನ ಮಾತು ಕೇಳಿ ಸರ್ಕಾರಕ್ಕೆ ತಪ್ಪು ಮಾಡಿದೆ ಎಂದು ಅನಿಸುತ್ತಿದೆ. ನಾಳೆಯಿಂದ ಧರ್ಮಸ್ಥಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು, ಜನರು ದೇವರ ಮೇಲೆ ವಿಶ್ವಾಸ ಇಡಬೇಕು ಎಂದರು.
ಧರ್ಮಸ್ಥಳದ ಬಗ್ಗೆ ಅಪಪ್ರಚಾರ, ಷಡ್ಯಂತ್ರ ನಡೆಯುತ್ತಿರುವುದನ್ನು ಖಂಡಿಸಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಅಭಿಯಾನ ಆರಂಭವಾಗಿದೆ. ಯಲಹಂಕದಿಂದ ಧರ್ಮಸ್ಥಳವರೆಗೆ 300 ಕಾರುಗಳಲ್ಲಿ ಯಾತ್ರೆ ಆರಂಭವಾಗಿದೆ. ಹಾಸನಕ್ಕೆ ಆಗಮಿಸಿದ ಯಾತ್ರೆಗೆ ಅದ್ದೂರಿ ಸ್ವಾಗತ ಸಿಕ್ಕಿದೆ.
ಬಿಜೆಪಿ ನಾಯಕರು ಮಂಜುನಾಥ ಸ್ವಾಮಿ ದರ್ಶನ ಪಡೆದು ಬಳಿಕ ಇಂದು ಧರ್ಮಸ್ಥಳದಲ್ಲೇ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಿಗ್ಗೆ ಧರ್ಮಸ್ಥಳದಲ್ಲಿ ವಿಶೇಷ ಸಂಕಲ್ಪದೊಂದಿಗಿ ಪೂಜೆ ನೆರವೇಸಲಿದ್ದಾರೆ. ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಇತರ ಶಾಸಕರು, ಬಿಜೆಪಿ ನಾಯಕರು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಈ ಮೂಲಕ ಧರ್ಮಸ್ಥಳದ ಪರ ನಾವಿದೇವೆ ಎಂಬ ಸಂದೇಶವನ್ನು ನೀಡುವುದಾಗಿ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.