HomeKarnatakaಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್ ; ಇನ್ಮುಂದೆ ಇಂಥವರಿಗೆ ಸಿಗಲ್ಲ ‘ಗೃಹಲಕ್ಷ್ಮಿ’ ಯೋಜನೆಯ ಹಣ..!

ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್ ; ಇನ್ಮುಂದೆ ಇಂಥವರಿಗೆ ಸಿಗಲ್ಲ ‘ಗೃಹಲಕ್ಷ್ಮಿ’ ಯೋಜನೆಯ ಹಣ..!

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಕೆಲವರು ನಮ್ಮ ಅಕೌಂಟ್ ಗೆ 2-3 ತಿಂಗಳಿನಿಂದ ಹಣ ಬರುತ್ತಿಲ್ಲ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರ ನಡುವೆ ಯಜಮಾನಿಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ಹೌದು, ಆದಾಯ ತೆರಿಗೆ ಪಾವತಿದಾರರ ಮನೆಯ ಯಜಮಾನಿಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಡಲಾಗಿದೆ.

ಆದಾಯ ತೆರಿಗೆ ಪಾವತಿಸುತ್ತಿರುವ ಲಕ್ಷಾಂತರ ಮಂದಿ ಅನರ್ಹರು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಇಂತಹ 1.78 ಲಕ್ಷ ಮಹಿಳೆಯರನ್ನು ಪತ್ತೆ ಮಾಡಲಾಗಿದೆ. ಅಂತಹವರಿಗೆ ಆದಾಯ ತೆರಿಗೆ ಪಾವತಿಸದ ಕುರಿತು ದೃಢೀಕರಣ ಪತ್ರ ತರಲು ಕೇಳಿದ್ದೆವು. 1.78 ಲಕ್ಷ ಮಂದಿ ಪೈಕಿ 6 ಸಾವಿರಕ್ಕೂ ಹೆಚ್ಚು ಮಂದಿ ದೃಢೀಕರಣ ಪತ್ರ ಸಲ್ಲಿಸಿದ್ದಾರೆ. ಇದೀಗ ಇವರನ್ನು ಯೋಜನೆಗೆ ಪರಿಗಣಿಸಲಾಗುವುದು. ದೃಢೀಕರಣ ಪತ್ರ ಸಲ್ಲಿಸದೇ ಇದ್ದವರನ್ನು ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಡಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular