HomeKarnatakaಪಟಾಕಿ ಸಿಡಿಸಿದ್ದಕ್ಕೆ 'BJP' ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ..!

ಪಟಾಕಿ ಸಿಡಿಸಿದ್ದಕ್ಕೆ ‘BJP’ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ..!

ಮಂಗಳೂರು : ಪಟಾಕಿ ಸಿಡಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿ ನಡೆದಿದೆ.

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಬರೋಬ್ಬರಿ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಹಿನ್ನೆಲೆ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು  ಗ್ರಾಮದ ಕುಶಲಪ್ಪಗೌಡ ಕಜೆ ಎನ್ನುವವರ ಮನೆ ಮುಂದೆ ಪಟಾಕಿ ಸಿಡಿಸಿದ್ದಾರೆ.

ಮನೆ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಗ್ರಾಮದ ಕುಶಲಪ್ಪಗೌಡ ರಾಜೇಶ್ ಎನ್ನುವವರ ಮೇಲೆ ತಲವಾರ್ ನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ರಾಜೇಶ್ ಸದ್ಯ ಉಜಿರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular