SHOCKING : ಕದ್ದುಮುಚ್ಚಿ ‘ಮದ್ಯ’ ಸೇವಿಸಿದ 13 ವರ್ಷದ ಬಾಲಕ, ಪೋಷಕರು ಬೈತಾರೆ ಎಂದು ಹೆದರಿ ಆತ್ಮಹತ್ಯೆ.!

ಚಿಕ್ಕಮಗಳೂರು : ಮದ್ಯ ಸೇವಿಸಿದ ಬಾಲಕ ಪೋಷಕರು ಬೈತಾರೆ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಮೇಲ್ಪಾಲ್ ನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನ ಪ್ರವಚನ್ (13) ಎಂದ ಗುರುತಿಸಲಾಗಿದೆ. ಕಳೆದ 4 ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪ್ರವಚನ್ ಮೇಲ್ಪಾಲ್ ಸರ್ಕಾರಿ ಶಾಲೆಯಲ್ಲಿ 9 ನೇ ತರಗತಿ ಓದುತ್ತಿದ್ದನು. ಸಂಬಂಧಿಕರ ಮದುವೆಗೆ ಹೋಗಿದ್ದಾಗ ಪ್ರವಚನ್ ಪಾರ್ಟಿಯಲ್ಲಿ ಮದ್ಯ ಸೇವಿಸಿದ್ದಾನೆ ಎನ್ನಲಾಗಿದೆ. ಮನೆಯಲ್ಲಿ ಈ ವಿಚಾರ ತಿಳಿದರೆ ಬೈಯುತ್ತಾರೆ ಎಂದು ಹೆದರಿ ಬಾಲಕ ಸೂಸೈಡ್ ಮಾಡಿಕೊಂಡಿದ್ದಾನೆ. ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read