ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಬಾಲಕ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಂದಿಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ದಳವಾಯಿ ಕೋಡಿಹಳ್ಳಿ ಗ್ರಾಮದ ಶಿವಣ್ಣ ಅವರ ಪುತ್ರ ಪೃಥ್ವಿ(15) ಮೃತಪಟ್ಟ ಬಾಲಕ. ದಳವಾಯಿ ಕೋಡಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಪೃಥ್ವಿ ಶಾಲೆಗೆ ರಜೆ ಇದ್ದ ಕಾರಣ ನಾಲ್ವರು ಸ್ನೇಹಿತರೊಂದಿಗೆ ಭಾನುವಾರ ಮಧ್ಯಾಹ್ನ ಈಜಲು ಹೋಗಿದ್ದಾನೆ.
ಸಂಜೆಯವರೆಗೂ ಬಾಲಕ ಪೃಥ್ವಿ ಮನೆಗೆ ಬಾರದ ಕಾರಣ ಹುಡುಕಾಟ ನಡೆಸಲಾಗಿದೆ. ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಎಂದು ಗೊತ್ತಾಗಿ ಪೋಷಕರು ಹುಡುಕಾಟ ನಡೆಸಿದ್ದಾರೆ. ನಂದಿಪುರ ಗ್ರಾಮದ ರಾಜೇಗೌಡ ಅವರ ಜಮೀನಿನ ಕೃಷಿಹೊಂಡದಲ್ಲಿ ಸೋಮವಾರ ಬಾಲಕನ ಮೃತದೇಹ ಪತ್ತೆಯಾಗಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

