ವ್ಯಾಜ್ಯ ಬಗೆಹರಿಸಿಕೊಳ್ಳಲು ಬಂಪರ್ ಅವಕಾಶ; ಸೆ.9 ರಂದು ರಾಜ್ಯದಾದ್ಯಂತ ‘ಲೋಕ ಅದಾಲತ್’

ಸೆ.9ರಂದು ರಾಷ್ಟ್ರೀಯ ಲೋಕ್ ಅದಾಲತ್ | National Lok Adalat on September 9

ನ್ಯಾಯಾಲಯದಲ್ಲಿ ಬಾಕಿ ಇರುವ ವಿವಿಧ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಬಂಪರ್ ಅವಕಾಶವೊಂದು ಸಿಗುತ್ತಿದೆ. ಸೆಪ್ಟೆಂಬರ್ 9ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ಇದರ ಸದುಪಯೋಗ ಪಡೆಯಬಹುದಾಗಿದೆ.

ನ್ಯಾಯಾಲಯದಲ್ಲಿ ಬಾಕಿ ಇರುವ ವಿವಿಧ ಸಿವಿಲ್ ವ್ಯಾಜ್ಯಗಳು, ಬಗೆಹರಿಸಬಹುದಾದ ಕ್ರಿಮಿನಲ್ ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ಮೋಟಾರು ವಾಹನ, ಕೌಟುಂಬಿಕ, ಭೂಸ್ವಾಧೀನ, ಕಂದಾಯ, ಜನನ ಮತ್ತು ಮರಣ ನೋಂದಣಿ, ಜೀವನಾಂಶ ಪ್ರಕರಣ ಹಾಗೂ ಇನ್ನಿತರೆ ಲಘು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮತ್ತು ವ್ಯಾಜ್ಯಪೂರ್ವ ಬ್ಯಾಂಕ್ ಸಾಲ ಮರುಪಾವತಿಯ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಈ ಲೋಕ ಅದಾಲತ್ ನಲ್ಲಿ ಅವಕಾಶ ಸಿಗಲಿದೆ.

ಕಕ್ಷಿದಾರರು ತಮ್ಮ ವಕೀಲರ ಮೂಲಕ ಅಥವಾ ತಾವೇ ಖುದ್ದಾಗಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read