ಬೆಂಗಳೂರು : ನಿಂತಲ್ಲೇ ಹೃದಯಾಘಾತ ಸಂಭವಿಸಿ ಕ್ಯಾಬ್ ಚಾಲಕ ಮೃತಪಟ್ಟ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ.
ಮೃತನನ್ನು ಅರಕಲಗೂಡ ತಾಲೂಕಿನ ಕಾಡನೂರು ಗ್ರಾಮದ ಅಭಿಷೇಕ್ (19) ಎಂದು ಗುರುತಿಸಲಾಗಿದೆ. ಗ್ರಾಮದ ಅನುಸೂಯ ಹಾಗೂ ರಾಮಕೃಷ್ಣ ದಂಪತಿ ಪುತ್ರ ಎಂದು ಹೇಳಲಾಗಿದೆ.
ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಬಸವೇಶ್ವರ ನಗರದಲ್ಲಿ ನಿಂತಿದ್ದ ಜಾಗದಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಅಷ್ಟರಲ್ಲೇ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ . ಮಗನನ್ನು ಕಳೆದುಕೊಂಡ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ.
You Might Also Like
TAGGED:ಹೃದಯಾಘಾತ