ಬೆಂಗಳೂರು : ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿದ ಖದೀಮರು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಅನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರವಿಕುಮಾರ್ ಎಂಬುವವರ ಮನೆಯಲ್ಲಿ ಈ ದರೋಡೆ ನಡೆದಿದೆ. ಮನೆಯಲ್ಲಿ ರವಿಕುಮಾರ್ ಪತ್ನಿ ನಾಗವೇಣಿ ಒಬ್ಬರೇ ಇರೋದನ್ನ ಗಮನಿಸಿದ ಖತರ್ನಾಕ್ ದಂಪತಿಗಳು ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ಬಂದು ನೀರು ಕೇಳಿದ್ದಾರೆ. ಅವರು ನೀರು ತರಲು ಅಡುಗೆಮನೆಗೆ ಹೋದ ನಾಗವೇಣಿಯನ್ನು ಪುರುಷ ಕೈ ಕಾಲು ಕಟ್ಟಿ ಕೂಡಿ ಹಾಕಿದ್ದಾನೆ . ನಂತರ ಚಾಕು ಹಿಡಿದು ಬೀರುವಿನ ಲಾಕರ್ ಓಪನ್ ಮಾಡಿಸಿ 200 ಗ್ರಾಂ ಚಿನ್ನಾಭರಣ ದೋಚಿ ಅಲ್ಲಿಂದ ದಂಪತಿ ಎಸ್ಕೇಪ್ ಆಗಿದೆ.
ಕೂಡಲೇ ಅತ್ತಿಬೆಲೆ ಪೊಲೀಸರಿಗೆ ಸುದ್ದಿ ಮುಟ್ಟಿಸಲಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
