ಅ. 3 ರಂದು ಧಾರವಾಡ ಮಹಾನಗರ ಪಾಲಿಕೆ : ಸ್ಥಾಯಿ ಸಮಿತಿಗೆ ಚುನಾವಣೆ

ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23 ನೇ ಅವಧಿಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗೆ ಚುನಾವಣೆಯನ್ನು ಆಯೋಜಿಸಲಾಗಿದೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ತೆರಿಗೆ ನಿರ್ಧರಣೆ ಹಣಕಾಸು ಮತ್ತು ಅಪೀಲುಗಳು ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿಗೆ ಸ್ಪರ್ಧಿಸುವವರು ಅಕ್ಟೋಬರ್ 3, 2024 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು.

ಪಾಲಿಕೆಯ ಚುನಾವಣೆಯನ್ನು ಅಕ್ಟೋಬರ್ 3, 2024 ರಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ನಡೆಸಲಾಗುವುದು ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತರು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಯ ಚುನಾವಣೆಯ ಅಧ್ಯಕ್ಷಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read