ಮೈಸೂರು : ಮೈಸೂರಿನಲ್ಲಿ ಕಳೆದ 8 ತಿಂಗಳ ಹಿಂದೆ ಆನೆ ದಾಳಿಗೆ ಒಳಗಾಗಿದ್ದ ರೈತರೊಬ್ಬರು ಇದೀಗ ಹುಲಿ ದಾಳಿಗೆ ಬಲಿಯಾಗಿದ್ದಾರೆ. ಸರಗೂರು ತಾಲೂಕಿನ ಹಳೇ ಹೆಗ್ಗುಡಿಲು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಹೌದು, ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿಯೊಂದು ದಾಳಿ ನಡೆಸಿದ್ದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ರೈತ ದಂಡನಾಯ್ಕ್ ಅಲಿಯಾಸ್ ಸ್ವಾಮಿ (58) ಎಂದು ಗುರುತಿಸಲಾಗಿದೆ.
ಸ್ವಾಮಿ ಜಮೀನಿಗೆ ತೆರಳುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದೆ ಎನ್ನಲಾಗಿದೆ. ನುಗು ವನ್ಯಜೀವಿಧಾಮ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಳೆದ 8 ತಿಂಗಳ ಹಿಂದೆ ಸ್ವಾಮಿ ಆನೆ ದಾಳಿಗೆ ಒಳಗಾಗಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೀಗ ಹುಲಿ ದಾಳಿಗೆ ಬಲಿಯಾಗಿದ್ದಾರೆ.
