Shocking: ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಹೀನ ಕೃತ್ಯ; ವೈದ್ಯನಿಂದಲೇ ಮಹಿಳಾ ರೋಗಿ ಮೇಲೆ‌ ರೇಪ್

ಪಶ್ಚಿಮ ಬಂಗಾಳ ಕೋಲ್ಕತ್ತಾದ ಆರ್.ಜಿ. ಕರ್‌ ಆಸ್ಪತ್ರೆಯಲ್ಲಿ ನಡೆದಿದ್ದ ಯುವ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಇದರ ಮಧ್ಯೆ ಈಗ ಹಸ್ನಾಬಾದ್‌ನಲ್ಲಿ ವೈದ್ಯರೊಬ್ಬರು ಮಹಿಳೆ ರೋಗಿಯೊಬ್ಬರಿಗೆ ಮತ್ತು ಬರಿಸುವ ಚುಚ್ಚುಮದ್ದು ನೀಡಿದ ನಂತರ ಅತ್ಯಾಚಾರ ಮಾಡಿದ್ದಾರೆ. ಮಹಿಳೆ ಮತ್ತು ಆಕೆಯ ಪತಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ವೈದ್ಯನನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ತನ್ನ ಪತಿ ಹೊರ ರಾಜ್ಯದಲ್ಲಿರುವಾಗ ಆರೋಪಿ ವೈದ್ಯರ ಬಳಿ ಚಿಕಿತ್ಸೆಗೆ ಹೋಗಿದ್ದೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಮೊದಲು ಆಕೆಗೆ ಚಿಕಿತ್ಸೆ ನೀಡಿದ ನಂತರ ಅತ್ಯಾಚಾರ ಎಸಗಿದ್ದಾನೆ ಎಂದು ಆಕೆ ತಿಳಿಸಿದ್ದಾರೆ.

ಅಷ್ಟೆ ಅಲ್ಲ, ಸಂತ್ರಸ್ತೆ ಮತ್ತಿನ ಸ್ಥಿತಿಯಲ್ಲಿದ್ದಾಗ ಆರೋಪಿ ಆಕೆಯ ಛಾಯಾಚಿತ್ರಗಳನ್ನು ಸೆರೆಹಿಡಿದು ಬ್ಲಾಕ್ ಮೇಲ್ ಮಾಡಿ, ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಅವರು ತಿಳಿಸಿದ್ದಾರೆ.

ತನ್ನನ್ನು ಬ್ಲ್ಯಾಕ್‌ಮೇಲ್ ಮಾಡುವ ಮೂಲಕ ಆರೋಪಿ ಒಂದಕ್ಕಿಂತ ಹೆಚ್ಚು ಬಾರಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳಾ ರೋಗಿ ಆರೋಪಿಸಿದ್ದು, ಜೊತೆಗೆ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ 4,00,000 ರೂ.ಗಳನ್ನು ಸುಲಿಗೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ದೂರಿನ ಪ್ರಕಾರ ಸಂತ್ರಸ್ತೆ ಸಾಮಾಜಿಕ ಪ್ರತಿಷ್ಠೆ ಕಳೆದುಕೊಳ್ಳುವ ಭಯದಿಂದ ಮೊದಲಿಗೆ ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ಆ ಅವಧಿಯಲ್ಲಿ ತನ್ನ ಪತಿ ಹೊರಗಿದ್ದ ಕಾರಣ ತಾನು ಅಸಹಾಯಕಳಾಗಿದ್ದೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಇತ್ತೀಚೆಗೆ, ತನ್ನ ಪತಿ ಮನೆಗೆ ಹಿಂದಿರುಗಿದಾಗ ತನ್ನ ಅಸಹಾಯಕತೆಯನ್ನು ಹೇಳಿಕೊಂಡ ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ.

ಆರೋಪಿ ವೈದ್ಯರನ್ನು ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಪಬ್ಲಿಕ್ ಪ್ರಾಸಿಕ್ಯೂಟರ್ ಐದು ದಿನಗಳ ಪೊಲೀಸ್ ಕಸ್ಟಡಿಗೆ ಕೋರಿದ್ದಾರೆ. ಸಂತ್ರಸ್ತೆಯ ಗೌಪ್ಯ ಹೇಳಿಕೆಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಿಕೊಳ್ಳುವುದು ಮುಂದಿನ ಹಂತವಾಗಿದೆ ಎಂದು ಮೂಲಗಳು ತಿಳಿಸಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read