ಬೆಂಗಳೂರು : ಭೀಮನ ಅಮಾವಾಸ್ಯೆ ದಿನವೇ ಪತಿ-ಪತ್ನಿ ನಡುವೆ ಕಲಹ ನಡೆದು 5 ವರ್ಷದ ಮಗಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ಉತ್ತರ ಜಿಲ್ಲೆಯ ಕೆಜಿ ಲಕ್ಕೇನಹಳ್ಳಿಯಲ್ಲಿ ನಡೆದಿದೆ.
ಪತಿ ಜಯರಾಮ್ ಹಾಗೂ ಪತ್ನಿ ಮಹಾಲಕ್ಷ್ಮಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗಳಿಗೆ 5 ವರ್ಷದ ಮಗಳು ಕೂಡ ಇದ್ದಳು. ಆಗಾದ ದಂಪತಿ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ಇಂದು ಇಬ್ಬರ ನಡುವೆ ಜಗಳ ತಾರಕಕ್ಕೇರಿದ್ದು, ಮಹಾಲಕ್ಷ್ಮಿ ತನ್ನ ಗಂಡನ ಜೊತೆ ಜಗಳ ಮಾಡಿಕೊಂಡು ರೂಮ್ ಗೆ 5 ವರ್ಷದ ಮಗಳು ಸಿರಿ ಕತ್ತು ಹಿಸುಕಿ ಕೊಲೆ ಮಾಡಿ ನಂತರ ತಾನು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅದೃಷ್ಟವಶಾತ್ ಮಹಾಲಕ್ಷ್ಮಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ 5 ವರ್ಷದ ಮಗಳು ಮೃತಪಟ್ಟಿದ್ದಾಳೆ. ಪತಿ ಜಯರಾಮ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
You Might Also Like
TAGGED:ಭೀಮನ ಅಮಾವಾಸ್ಯೆ