BIG NEWS : ಕಡೆ ಕ್ಷಣದಲ್ಲಿ ರದ್ದಾದ ವಿಮಾನ; ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

ಬೆಂಗಳೂರಿನಿಂದ ಶಿವಮೊಗ್ಗಕ್ಕೆ 11 ಗಂಟೆಗೆ ಬರಬೇಕಾಗಿದ್ದ ಇಂಡಿಗೋ ವಿಮಾನ ಇಂದು ತಡವಾಗಿ 12-30ಕ್ಕೆ ಬಂದಿದೆ. ಮತ್ತೆ ಬೆಂಗಳೂರಿಗೆ ವಾಪಾಸು 2 ಗಂಟೆಗೆ ಟೇಕಾಫ್ ಆಗಲಿದೆ ಎಂದು ಮಾಹಿತಿ ನೀಡಿದ ಅಧಿಕಾರಿಗಳು ಪ್ರಯಾಣಿಕರನ್ನು ಬಸ್ಸಿನಲ್ಲಿ ಸುಮಾರು 3 ಗಂಟೆಗಳ ಕಾಲ ಕಾಯಿಸಿ ಬಳಿಕ 2 ಗಂಟೆ ಸುಮಾರಿಗೆ ಶಿವಮೊಗ್ಗ-ಬೆಂಗಳೂರು ವಿಮಾನ ತಾಂತ್ರಿಕ ದೋಷದಿಂದಾಗಿ ರದ್ದುಪಡಿಸಲಾಗಿದೆ ಎಂಬ ಮಾಹಿತಿ ನೀಡಿದ್ದಾರೆ.

ಇದರಿಂದ ವಿದೇಶಗಳಿಗೆ ಬೆಂಗಳೂರು ಮೂಲಕ ತೆರಳಬೇಕಾಗಿದ್ದ ಕೆಲವು ಪ್ರಯಾಣಿಕರು ವಿಮಾನ ಯಾನ ಸಂಸ್ಥೆಯ ಮತ್ತು ಶಿವಮೊಗ್ಗ ಏರ್‌ಪೋರ್ಟ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಯಾಣಿಕರೊಬ್ಬರು ಇದು ನನಗೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಎರಡನೇ ಅನುಭವ. ನಾನೀಗ ಟ್ಯಾಕ್ಸಿಯಲ್ಲಿ ತುರ್ತಾಗಿ ಬೆಂಗಳೂರಿಗೆ ತೆರಳುತ್ತಿದ್ದೇನೆ. ಇನ್ನಾದರೂ ಈ ಬಗ್ಗೆ ಗಂಭೀರವಾಗಿ ಚಿಂತಿಸಿ ವಿಮಾನಯಾನ ಪ್ರಾಧಿಕಾರದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read