HomeKarnatakaBIG NEWS : ಪೊಲೀಸರ ವಿರುದ್ಧವೇ ದೂರು ನೀಡಿದ ಮಾಜಿ ಶಾಸಕ

BIG NEWS : ಪೊಲೀಸರ ವಿರುದ್ಧವೇ ದೂರು ನೀಡಿದ ಮಾಜಿ ಶಾಸಕ

ಮಂಡ್ಯ: ಕೆ.ಎಸ್.ಆರ್.ಟಿ.ಸಿ.ಬಸ್ ಚಾಲಕ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಪೊಲೀಸರ ವಿರುದ್ಧ ಮಾಜಿ ಶಾಸಕರು ದೂರು ನೀಡಿರುವ ಘಟನೆ ನಡೆದಿದೆ.

ನಾಗಮಂಗಲ ಡಿಪೋ ಬಸ್ ಚಾಲಕ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಸ್ ಚಾಲಕ ಜಗದೀಶ್ ನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾಜಿ ಶಾಸಕ ಸುರೇಶ್ ಗೌಡ ಆಂಬುಲೆನ್ಸ್ ತಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಡಿಯೋ ಕೂಡ ವೈರಲ್ ಆಗಿತ್ತು. ಇದೀಗ ಈ ವಿಚಾರ ಸಂಬಂಧ ಮಾಜಿ ಶಾಸಕ ಸುರೇಶ್ ಗೌಡ ಪೊಲೀಸರ ವಿರುದ್ಧವೇ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಗಮಂಗಲ ಟೌನ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ವಿರುದ್ಧ ದಕ್ಷಿಣ ವಲಯ ಐಜಿಪಿ, ಮಂಡ್ಯ ಎಸ್ ಪಿ ನಾಗಮಂಗಲ ಡಿವೈ ಎಸ್ ಪಿಯವರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular