HomeLatest Newsದೀಪಾವಳಿಗೆ ಮುನ್ನ ಸರ್ಕಾರಿ ನೌಕರರಿಗೆ ಕೊಡುಗೆ: ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಅನುಮೋದನೆ

ದೀಪಾವಳಿಗೆ ಮುನ್ನ ಸರ್ಕಾರಿ ನೌಕರರಿಗೆ ಕೊಡುಗೆ: ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಅನುಮೋದನೆ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಮುನ್ನ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಸರ್ಕಾರಿ ನೌಕರರಿಗೆ ದೀಪಾವಳಿ ಕೊಡುಗೆ ನೀಡಿರುವ ರಾಜ್ಯ ಸರ್ಕಾರ ತುಟ್ಟಿಭತ್ಯೆ ಹೆಚ್ಚಳ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೇಕಡ 2ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಿದ್ದು, ಒಂದೆರಡು ದಿನಗಳಲ್ಲಿ ಸರ್ಕಾರದ ಆದೇಶ ಹೊರಬೀಳಲಿದೆ. 2025ರ ಜುಲೈ 1 ರಿಂದ ಪೂರ್ವನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular