ಪ್ರೀತಿಸಿ ಕೈ ಕೊಟ್ಟ ಹುಡುಗಿ : ಬೀದರ್ ನಲ್ಲಿ ‘ಪೊಲೀಸ್ ಕಾನ್ಸ್ ಟೇಬಲ್’ ಆತ್ಮಹತ್ಯೆ

ಬೀದರ್ : ಹುಡುಗಿ ಪ್ರೀತಿಸಿ ಕೈ ಕೊಟ್ಟಳೆಂದು ಮನನೊಂದು ಬೀದರ್ ನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೀದರ್ ಜಿಲ್ಲೆಯ ಬಸವ ಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಮೇಶ್ ನಾಯ್ಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಮೇಶ್ ನಾಯಕ್ ಒಂದು ಹುಡುಗಿಯನ್ನು ಲವ್ ಮಾಡುತ್ತಿದ್ದು. ಕೊನೆಗೆ ಹುಡುಗಿ ಇವರನ್ನು ನಿರಾಕರಿಸಿದ್ದಾರೆ ಎನ್ನಲಾಗಿದೆ. ಇದರಿಂದ ಮನನೊಂದು ಉಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಬಸವ ಕಲ್ಯಾಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 2021 ರಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆಗಿ ಇವರು ನೇಮಕಾತಿ ಪಡೆದಿದ್ದರು. ಆದರೆ ಪ್ರೀತಿ ಸಿಗಲಿಲ್ಲವೆಂದು ಸಾವಿನ ಹಾದಿ ತುಳಿದಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read