ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಾಗಿ ಮನೆಗೆ ಬಂದ ಅಧಿಕಾರಿಗಳ ದಂಡು: ಮಾಹಿತಿ ನೀಡಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಸಿಎಂ ಸಿದ್ಧರಾಮಯ್ಯ ಸಮೀಕ್ಷೆದಾರರಿಗೆ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಇಂದು ಆಗಮಿಸಿದ್ದ ಸಮೀಕ್ಷೆದಾರರು ಸಿದ್ಧರಾಮಯ್ಯ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ನಮ್ಮ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗಾಗಿ ನನ್ನ ಮನೆಗೆ ಭೇಟಿನೀಡಿದ ಸಿಬ್ಬಂದಿಗಳಿಗೆ ಮಾಹಿತಿ ನೀಡಿ, ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ ಎಂದು ಸಿಎಂ ತಿಳಿಸಿದ್ದಾರೆ.

ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ನಮ್ಮ ಸರ್ಕಾರವು ಈ ಸಮೀಕ್ಷೆಯನ್ನು ಕೈಗೊಂಡಿದೆ.

ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು, ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು. ಆಗ ಮಾತ್ರ ಸಮಾಜದ ವಾಸ್ತವ ಸ್ಥಿತಿಗತಿಯ ಬಗೆಗೆ ನಿಖರ ಮಾಹಿತಿ ದೊರೆತು, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರನ್ನು ಗುರುತಿಸಿ, ಅವರ ಪ್ರಗತಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದಿದ್ದಾರೆ.

ಇದು ಯಾವುದೇ ಒಂದು ಜಾತಿಗೆ ಸೀಮಿತವಾದ ಸಮೀಕ್ಷೆಯಲ್ಲ, ರಾಜ್ಯದ ಪ್ರತಿಯೊಬ್ಬರ ಜೀವನದ ಮೇಲೆ ಬೆಳಕು ಚೆಲ್ಲುವ ಒಂದು ವೈಜ್ಞಾನಿಕ ಪ್ರಯತ್ನ. ಸಮೀಕ್ಷೆಯಲ್ಲಿ ಮಾಹಿತಿ ನೀಡುವುದರಿಂದ ನಿಮ್ಮ ವೈಯಕ್ತಿಕ ಮಾಹಿತಿ ದುರ್ಬಳಕೆ ಖಂಡಿತಾ ಆಗದು. ಚಿಂತೆ ಬಿಟ್ಟು, ಧೈರ್ಯವಾಗಿ ಸಿಬ್ಬಂದಿಗಳ ಜೊತೆ ಮಾಹಿತಿ ಹಂಚಿಕೊಳ್ಳಿ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read