ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣದ ಹಂತದ ಕಟ್ಟಡ ಕುಸಿದು ಬಿದ್ದು ಐವರು ಮೃತಪಟ್ಟಿದ್ದಾರೆ. ಮತ್ತು ಈ ದುರಂತದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ.
ಕಟ್ಟಡ ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎಲ್ಲರನ್ನು ಬೆಚ್ಚಿ ಬೀಳಿಸಿದೆ.
ಬೆಂಗಳೂರಿನ ಪೂರ್ವ ಭಾಗದಲ್ಲಿರುವ ಹೊರಮಾವು ಅಗರ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದು, ಹಲವರು ಇನ್ನೂ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ. ಎನ್ಡಿಆರ್ಎಫ್, ಎಸ್ಡಿಆರ್ಎಫ್ ಮತ್ತು ಅಗ್ನಿಶಾಮಕ ದಳದ ತಂಡಗಳು ಕುಸಿದ ಸ್ಥಳದಲ್ಲಿದ್ದು, ರಾತ್ರಿಯಿಡೀ ವ್ಯಾಪಕ ಶೋಧ ನಡೆಸುತ್ತಿವೆ.ಈವರೆಗೆ 5 ಶವಗಳನ್ನು ಹೊರತೆಗೆಯಲಾಗಿದೆ. ಘಟನೆಯಲ್ಲಿ 5 ಮಂದಿ ಗಾಯಗೊಂಡಿದ್ದು, ಅವರಲ್ಲಿ 4 ಮಂದಿಯನ್ನು ನಾರ್ತ್ ಆಸ್ಪತ್ರೆಗೆ ಹಾಗೂ ಇನ್ನೊಬ್ಬರನ್ನು ಹೋಸ್ಮತ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೂರ್ವ ವಿಭಾಗದ ಡಿಸಿಪಿ ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಬುಧವಾರ ಬೆಳಿಗ್ಗೆ ವೇಳೆಗೆ 17 ಜನರನ್ನು ಸ್ಥಳದಿಂದ ರಕ್ಷಿಸಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಈ ಪ್ರದೇಶದಲ್ಲಿ ಭಾರಿ ಮಳೆಯ ನಡುವೆ ರಕ್ಷಣಾ ತಂಡಗಳು ಕೆಲಸವನ್ನು ಮುಂದುವರಿಸಿವೆ, ಇದು ಕಟ್ಟಡ ಕುಸಿತಕ್ಕೆ ಒಂದು ಕಾರಣವಾಗಿದೆ. ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಇಸ್ಪೀಟ್ ಪ್ಯಾಕ್ನಂತೆ ಕುಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Chilling video shows under-construction building in Bengaluru collapse like a pack of cards
One worker was killed in the building collapse that occurred in Babusapalya, #Bengaluru on Tuesday amid rains. 14 were rescued. Five are still missing. pic.twitter.com/T2n8s3b9jO
— Yamini Chincholi (@YaminiChincholi) October 22, 2024