HomeKarnatakaBREAKING : ಬೆಂಗಳೂರಿನ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, ಹಲವರ ರಕ್ಷಣೆ..!

BREAKING : ಬೆಂಗಳೂರಿನ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, ಹಲವರ ರಕ್ಷಣೆ..!

ಬೆಂಗಳೂರು : ಬೆಂಗಳೂರಿನ ಆರ್ ಟಿ ನಗರದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಎಲ್ಲರನ್ನು ರಕ್ಷಣೆ ಮಾಡಲಾಗಿದೆ.

ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದ 2 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ 40 ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳು ಕಟ್ಟಡದಲ್ಲಿ ಸಿಲುಕಿಕೊಂಡಿದ್ದು, ಎಲ್ಲರನ್ನೂ ಏಣಿ ಮೂಲಕ  ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿ ಹೊರಗೆ ಕರೆ ತಂದಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular