ಬೆಂಗಳೂರು : ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಸಮುದಾಯಕ್ಕೆ ಭರ್ಜರಿ ಗಿಫ್ಟ್ ಸಿಕ್ಕಿದ್ದು, ಸಾಮೂಹಿಕ ವಿವಾಹಕ್ಕೆ 50,000 ಸಹಾಯಧನ ನೀಡುತ್ತೇವೆ ಎಂದು ಸಚಿವ ಜಮೀರ್ ಅಹಮದ್ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ‘ ಅಲ್ಪಸಂಖ್ಯಾತರ ಸಮುದಾಯಕ್ಕೆ ಸಾಮೂಹಿಕ ವಿವಾಹಕ್ಕೆ 50,000 ಸಹಾಯಧನ ಕೊಡುತ್ತೇವೆ ಎಂದು ಬಜೆಟ್ ನಲ್ಲಿ ಘೋಷಣೆ ಮಾಡಿದ್ದೆವು. ಅಂತೆಯೇ ಆದೇಶ ಆಗಿದೆ ಎಂದರು. ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಸೇರಿದಂತೆ ಧನಸಹಾಯ ಮಾಡುತ್ತಿದ್ದೇವೆ ಎಂದರು.
ರಾಜ್ಯದ ಅರೇಬಿಕ್ ಮದರಸಾ ಬೋಧಕರಿಗೆ ಕನ್ನಡ ಕಲಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.ಮೊದಲ ಹಂತದಲ್ಲಿ 200 ಮದರಸಾಗಳ ಬೋಧಕರಿಗೆ ಕನ್ನಡ ಕಲಿಸಲಿದ್ದು, ಮುಂದಿನ ದಿನಗಳಲ್ಲಿ ಮಸೀದಿಗಳ ಮೌಲ್ವಿಗಳಿಗೂ ಕನ್ನಡ ಕಲಿಸಲಾಗುವುದು ಸಚಿವ ಜಮೀರ್ ಅಹ್ಮದ್ ತಿಳಿಸಿದ್ದಾರೆ.