HomeKarnatakaBREAKING: ಟ್ರಾಫಿಕ್ ಫೈನ್ ಕಟ್ಟುವವರಿಗೆ ಭರ್ಜರಿ ರಿಯಾಯ್ತಿ: ದಂಡದ ಮೊತ್ತ ಅರ್ಧದಷ್ಟು ಕಡಿತ

BREAKING: ಟ್ರಾಫಿಕ್ ಫೈನ್ ಕಟ್ಟುವವರಿಗೆ ಭರ್ಜರಿ ರಿಯಾಯ್ತಿ: ದಂಡದ ಮೊತ್ತ ಅರ್ಧದಷ್ಟು ಕಡಿತ

ಬೆಂಗಳೂರು: ಟ್ರಾಫಿಕ್ ಫೈನ್ ಕಟ್ಟುವವರಿಗೆ ಭರ್ಜರಿ ರಿಯಾಯಿತಿ ನೀಡಲಾಗಿದೆ. ಫೈನ್ ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಲು ಆದೇಶಿಸಲಾಗಿದೆ.

ಕಾನೂನು ಸೇವೆಗಳ ಪ್ರಾಧಿಕಾರದ ಮನವಿ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ. ವೀರಪ್ಪ ಮನವಿ ಮೇರೆಗೆ ಸರ್ಕಾರದಿಂದ ರಿಯಾಯಿತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆಬ್ರವರಿ 11 ರೊಳಗೆ ಫೈನ್ ಕಟ್ಟುವವರಿಗಾಗಿ ಸೀಮಿತ ಅವಧಿಗೆ ರಿಯಾಯಿತಿ ನೀಡಲಾಗುವುದು. ಫೆಬ್ರವರಿ 11 ಲೋಕ ಅದಾಲತ್ ಹಿನ್ನೆಲೆಯಲ್ಲಿ ರಿಯಾಯಿತಿ ನೀಡಲಾಗುತ್ತದೆ. ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿಗಳಿಂದ ಆದೇಶ ಹೊರಡಿಸಲಾಗಿದೆ. ಈ ಮೂಲಕ ಟ್ರಾಫಿಕ್ ಫೈನ್ ಕಟ್ಟುವವರಿಗೆ ಭರ್ಜರಿ ರಿಯಾಯಿತಿ ಘೋಷಿಸಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular