ಮೈಸೂರು : ಮೈಸೂರಿನಲ್ಲಿ ನಾಳೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಮೈಸೂರಿನಲ್ಲಿ ಅಕ್ಟೋಬರ್ 17 ರಂದು (ನಾಳೆ) ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. 200ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗಿಯಾಗಲಿದ್ದು, ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೂ ಭಾಗವಹಿಸಲು ಅವಕಾಶ ಇರಲಿದೆ.
ಹೆಚ್ಚಿನ ಮಾಹಿತಿ ಮತ್ತು ನೋಂದಣಿಗಾಗಿ https://udyogamela.ksdckarnataka.com ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.
ಈ ಉದ್ಯೋಗಮೇಳಕ್ಕೆ ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಹತೆಯನ್ನು ಹೊಂದಿರುವ ನಿರುದ್ಯೋಗ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ವಲಯಗಳ 200ಕ್ಕೂ ಅಧಿಕ ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿನ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು.ಉದ್ಯೋಗದಾತರು ಹಾಗೂ ಉದ್ಯೋಗಾಕಾಂಕ್ಷಿಗಳು https://udyogamela.ksdckarnataka.com ಗೆ ಭೇಟಿ ನೀಡಿ ನೋಂದಣಿಯಾಗಲು ಕೋರಿದೆ. ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡಿರುವ ಯುವಕ/ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಮೇಳದಲ್ಲಿ ಭಾಗವಹಿಸಲು ತಿಳಿಸಿದೆ.
ಮೈಸೂರಿನಲ್ಲಿ ಅಕ್ಟೋಬರ್ 17 ರಂದು (ನಾಳೆ) ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. 200ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗಿಯಾಗಲಿದ್ದು, ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೂ ಭಾಗವಹಿಸಲು ಅವಕಾಶ ಇರಲಿದೆ.
— DIPR Karnataka (@KarnatakaVarthe) October 16, 2025
ಹೆಚ್ಚಿನ ಮಾಹಿತಿ ಮತ್ತು ನೋಂದಣಿಗಾಗಿ https://t.co/iUX9F0x5He ವೆಬ್‌ಸೈಟ್‌ಗೆ ಭೇಟಿ ನೀಡಿ.#JobFairMysuru I… pic.twitter.com/yFwZdoBqyh