HomeKarnatakaBREAKING : ಕರ್ನಾಟಕದಲ್ಲಿ ಏ. 26, ಮೇ. 7ರಂದು ಮತದಾನ, ಇಲ್ಲಿದೆ ಜಿಲ್ಲಾವಾರು ಮಾಹಿತಿ...

BREAKING : ಕರ್ನಾಟಕದಲ್ಲಿ ಏ. 26, ಮೇ. 7ರಂದು ಮತದಾನ, ಇಲ್ಲಿದೆ ಜಿಲ್ಲಾವಾರು ಮಾಹಿತಿ |Lok Sabha Election 2024

ಬೆಂಗಳೂರು  :     ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು,  ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7ರಂದು 2 ಹಂತದಲ್ಲಿ ಮತದಾನ ನಡೆಯಲಿದೆ.

ಈ ಬಗ್ಗೆ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ‘ ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದ್ದು, ಎರಡನೇ ಹಂತದ ಮತದಾದನ ಮೇ 7 ರಂದು ನಡೆಯಲಿದೆ  ಎಂದರು.

ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದ್ದು, ಉತ್ತರ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಏಪ್ರಿಲ್ 26 ರಂದು ಈ ಜಿಲ್ಲೆಗಳಲ್ಲಿ ಮತದಾನ

ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ.

ಮೇ 7 ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ಮತದಾನ

ಕರ್ನಾಟಕದಲ್ಲಿ ಮೇ 7 ರಂದು ಒಟ್ಟು 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.
ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರಗಿ, ಬೀದರ್, ಹುಬ್ಬಳಿ – ಧಾರವಾಡ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ.

ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular