HomeKarnatakaBREAKING : 'ಚಾರ್ಮಾಡಿ ಘಾಟಿ'ಯಲ್ಲಿ ದಾರಿ ಕಾಣದೇ 100 ಅಡಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

BREAKING : ‘ಚಾರ್ಮಾಡಿ ಘಾಟಿ’ಯಲ್ಲಿ ದಾರಿ ಕಾಣದೇ 100 ಅಡಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಕಾಣದೇ 100 ಅಡಿ ಪ್ರಪಾತಕ್ಕೆ ಲಾರಿಯೊಂದು ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸೋಮನಕಾಡು ಬಳಿ ಇಂದು ನಡೆದಿದೆ.

ಸೋಮನಕಾಡು ಬಳಿ 100 ಅಡಿ ಪ್ರಪಾತಕ್ಕೆ ಲಾರಿ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಾರಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು, ಸ್ಥಳೀಯರು ಧಾವಿಸಿ ಲಾರಿಯನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular