ನವದೆಹಲಿ: ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು 6 ಅಗ್ನಿಶಾಮಕ ವಾಹನಗಳು ದೌಡಾಯಿಸಿದೆ.
ಏಮ್ಸ್ ನ ಎಂಡೋಸ್ಕೋಪಿ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಲ್ಲ ರೋಗಿಗಳನ್ನು ಸ್ಥಳಾಂತರಿಸಲಾಗಿದೆ. ಸುಮಾರು 11 ಗಂಟೆ ಸುಮಾರಿಗೆ ಬೆಂಕಿ ಹತ್ತಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಬೆಂಕಿ ನಂದಿಸಲು 6 ಅಗ್ನಿಶಾಮಕ ವಾಹನಗಳು ದೌಡಾಯಿಸಿದೆ.
ಹಳೆಯ ಒಪಿಡಿಯ ಎರಡನೇ ಮಹಡಿಯಲ್ಲಿರುವ ತುರ್ತು ವಾರ್ಡ್ ಮೇಲಿರುವ ಎಂಡೋಸ್ಕೋಪಿ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೊಠಡಿಯಲ್ಲಿದ್ದ ಎಲ್ಲ ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಏಮ್ಸ್ ಮೂಲಗಳು ತಿಳಿಸಿವೆ. ಏಮ್ಸ್ ಕಟ್ಟಡದ ಎರಡನೇ ಮಹಡಿಯಲ್ಲಿ ಭಾರಿ ಬೆಂಕಿಯ ಕೆನ್ನಾಲಿಗೆ ಎದ್ದಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.
https://twitter.com/ANI/status/1688440370601119744?ref_src=twsrc%5Etfw%7Ctwcamp%5Etweetembed%7Ctwterm%5E1688440370601119744%7Ctwgr%5E929414ae1d91e0288de87cfa54d97bf15bf41a06%7Ctwcon%5Es1_&ref_url=https%3A%2F%2Fwww.indiatvnews.com%2Fdelhi%2Ffire-breaks-out-at-delhi-aiims-rescue-operation-on-latest-update-2023-08-07-885281