ಬೆಂಗಳೂರು : ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ ಗೆ ಬೆಂಕಿ ತಗುಲಿದ್ದು, ಭಾರಿ ದುರಂತವೊಂದು ತಪ್ಪಿದೆ .ಹೆಚ್ ಎ ಎಲ್ ಏರ್ ಪೋರ್ಟ್ ನ ಮುಖ್ಯ ಗೇಟ್ ಬಳಿ ಈ ಘಟನೆ ನಡೆದಿದೆ.
75 ಪ್ರಯಾಣಿಕರಿದ್ದ ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಎಚ್ಚೆತ್ತ ನಿರ್ವಾಹಕರು ಎಲ್ಲಾ ಪ್ರಯಾಣಿಕರನ್ನು ಬಸ್ ನಿಂದ ಕೆಳಗಿಳಿಸಿದ್ದಾರೆ. ಹೆಚ್ ಎಎ ಎಲ್ ಗೇಟ್ ಬಳಿ ಈ ಘಟನೆ ನಡೆದಿದೆ.
ಇಂದು ಬೆಳಗ್ಗೆ 5 : 15 ಕ್ಕೆ ಈ ಘಟನೆ ನಡೆದಿದೆ. ಬಸ್ ಮೆಜೆಸ್ಟಿಕ್ ನಿಂದ ಕಾಡುಗೋಡಿಗೆ ತೆರಳುತ್ತಿತ್ತು ಎನ್ನಲಾಗಿದೆ.
ಇಂಜಿನ್’ ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್’ ಗೆ ಹರಡಿದೆ. ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದೆ.