ಸತ್ಯ ನಿಷ್ಠುರಿ, ಖಚಿತ ನಿಲುವು ಹೊಂದಿದವರು: ಮೊಗಳ್ಳಿ ಗಣೇಶ್ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಆಘಾತ

ಬೆಂಗಳೂರು: ಹಿರಿಯ ಕತೆಗಾರ, ವಿಮರ್ಶಕ ಹಾಗೂ ಚಿಂತಕ ಡಾ. ಮೊಗಳ್ಳಿ ಗಣೇಶ್(64) ಭಾನುವಾರ ಬೆಳಗ್ಗೆ ಹೊಸಪೇಟೆಯ ತಮ್ಮ ನಿವಾಸದಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.

ನಾಡಿನ ಪ್ರಖ್ಯಾತ ಸಾಹಿತಿ ಡಾ.ಮೊಗಳ್ಳಿ ಗಣೇಶ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಕನ್ನಡ ಸಾಹಿತ್ಯ ಲೋಕಕ್ಕೆ ಕತೆ, ಕಾವ್ಯ, ಕಾದಂಬರಿಗಳನ್ನು ನೀಡುವುದರ ಜೊತೆಯಲ್ಲಿ ಜಾನಪದವನ್ನೂ ಒಳಗೊಂಡಂತೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಅವರು ಮಾಡಿರುವ ಅಧ್ಯಯನ ಮತ್ತು ಸಂಶೋಧನೆ ಅನನ್ಯವಾದುದು.

ಸತ್ಯ ನಿಷ್ಠುರಿಯಾಗಿದ್ದ ಡಾ.ಮೊಗಳ್ಳಿ ಅವರು ಖಚಿತವಾದಂತಹ ಒಲವು-ನಿಲುವುಗಳನ್ನು ಹೊಂದಿದವರು. ಅವರಿನ್ನೂ ಬಹಳಷ್ಟು ಬರೆಯುವುದಿತ್ತು. ಅವರ ಅನಿರೀಕ್ಷಿತ ನಿರ್ಗಮನದಿಂದ ಕನ್ನಡ ಸಾಹಿತ್ಯ ಬಡವಾಗಿದೆ. ಡಾ.ಮೊಗಳ್ಳಿ ಅವರ ನಿಧನಕ್ಕೆ ನನ್ನ ಸಂತಾಪಗಳು. ಅವರ ಕುಟುಂಬ ಮತ್ತು ಗೆಳೆಯರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read