HomeKarnatakaBREAKING: ಹೊಸ ವರ್ಷ ಸಂಭ್ರಮಾಚರಣೆ ವೇಳೆ ಯುವತಿಯೊಂದಿಗೆ ಅಸಭ್ಯ ವರ್ತನೆ: ಅಟ್ಟಾಡಿಸಿ ಗೂಸಾ ನೀಡಿದ ಜನ

BREAKING: ಹೊಸ ವರ್ಷ ಸಂಭ್ರಮಾಚರಣೆ ವೇಳೆ ಯುವತಿಯೊಂದಿಗೆ ಅಸಭ್ಯ ವರ್ತನೆ: ಅಟ್ಟಾಡಿಸಿ ಗೂಸಾ ನೀಡಿದ ಜನ

ಬೆಂಗಳೂರು: ಹೊಸ ವರ್ಷ ಆಚರಣೆಯ ಸಂಭ್ರಮದ ಹೊತ್ತಲ್ಲೇ ಯುವತಿಯ ಜೊತೆಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಗೂಸಾ ನೀಡಲಾಗಿದೆ.

ಬೆಂಗಳೂರಿನ ಕೋರಮಂಗಲದ ಹೆಚ್.ಡಿ.ಎಫ್.ಸಿ. ಜಂಕ್ಷನ್ ಬಳಿ ಘಟನೆ ನಡೆದಿದ್ದು, ವ್ಯಕ್ತಿಯನ್ನು ಥಳಿಸಲಾಗಿದೆ. ಸಂಭ್ರಮಾಚರಣೆಯ ಸಂದರ್ಭದಲ್ಲಿ ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯನ್ನು ಅಟ್ಟಾಡಿಸಿ ಜನ ಗೂಸಾ ನೀಡಿದ್ದಾರೆ.

ಹೊಸ ವರ್ಷದ ಸಂಭ್ರಮಾಚರಣೆ ಹಿನ್ನಲೆಯಲ್ಲಿ ಯಾವುದೇ ಆಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ ಬಿಗಿ ಬಂದೋಬಸ್ತ ಕೈಗೊಳ್ಳಲಾಗಿದ್ದು, ಕ್ಯಾಮರಾಗಳ ಮೂಲಕವೂ ನಿಗಾ ವಹಿಸಲಾಗಿದೆ. ಹೀಗಿರುವಾಗಲೇ ಕೋರಮಂಗಲದಲ್ಲಿ ಕಾಮುಕನೊಬ್ಬ ಯುವತಿಯ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಾನೆ ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಟ್ಟಾಡಿಸಿ ಧರ್ಮದೇಟು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular