ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಹೇಮಣ್ಣ(68) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಹೊಳೆಹೊನ್ನೂರು ಕೊಪ್ಪ ಗ್ರಾಮದ ಸರ್ಕಾರಿ ಪದವಿ ಕಾಲೇಜು ರಸ್ತೆಯಲ್ಲಿ ಹೇಮಣ್ಣ ಅವರನ್ನು ಕೊಲೆ ಮಾಡಲಾಗಿದೆ. ಈ ಹಿಂದೆಯೂ ಹೇಮಣ್ಣ ಅವರ ಮೇಲೆ ದಾಳಿ ನಡೆಸಲಾಗಿತ್ತು ಆಗ ಅವರು ಪಾರಾಗಿದ್ದರು.
ಇಂದು ಬೆಳಗ್ಗೆ ವಾಕಿಂಗ್ ಹೋಗಿದ್ದ ಸಂದರ್ಭದಲ್ಲಿ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಥಳಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹೊಳೆಹೊನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.