VIDEO : ಆಟೋ ಎತ್ತಿ ತಾಯಿಯನ್ನು ಕಾಪಾಡಿದ ಮಂಗಳೂರಿನ ಬಾಲಕಿ ; ಸಿಎಂ ಸಿದ್ದರಾಮಯ್ಯ ಶ್ಲಾಘನೆ..!

ಮಂಗಳೂರು :  ಆಟೋ ಎತ್ತಿ ತಾಯಿಯನ್ನು ಕಾಪಾಡಿದ ಮಂಗಳೂರಿನ ಬಾಲಕಿಗೆ ಸಿಎಂ ಸಿದ್ದರಾಮಯ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಅಪಘಾತವಾದಾಗ ಮೊಬೈಲ್ ನಲ್ಲಿ ವಿಡಿಯೋ ಮಾಡುವ ಈ ಕಾಲದಲ್ಲಿ ವಿದ್ಯಾರ್ಥಿನಿಯ ಸಾಹಸ ಸಮಾಜಕ್ಕೆ ಸಂದೇಶ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆದ ಅಪಘಾತದ ಬಗ್ಗೆ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ‘ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ,

ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ. ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ, ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ. ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಎಂದು ಹೇಳಿದ್ದಾರೆ.

https://twitter.com/siddaramaiah/status/1833171091021345269

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read