BREAKING : ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಶಿವಮೊಗ್ಗ : ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದಾಸನಕೊಡಿಗೆ ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಶಮಿತಾ (24) ಎಂದು ಗುರುತಿಸಲಾಗಿದೆ. ನೊಣಬೂರಿನ ಬಿಜ್ಜಳ ಗ್ರಾಮದ ಶಮಿತಾ ಮಾರ್ಚ್ 2023 ರಲ್ಲಿ ದಾಸನಕೊಡಿಗೆಯ ವಿದ್ಯಾರ್ಥ್ ಜೊತೆ ಮದುವೆಯಾಗಿದ್ದರು. ಪತಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಪತಿಯ ತಂದೆ ತಾಯಿ ಮಾತ್ರ ಮನೆಯಲ್ಲಿ ಇದ್ದರು. ಈ ವೇಳೆ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಗ್ಯ ಸಮಸ್ಯೆಯಿಂದ ನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read