
ಮುಳಿಹಿತ್ಲು ಎಂಬಲ್ಲಿನ ಹುಲಿವೇಷ ತಂಡದ ಕುಣಿತದ ವೇಳೆ ದುರ್ಘಟನೆ ನಡೆದಿದೆ. ಹುಲಿವೇಷಧಾರಿಯೊಬ್ಬರು ಕಸರತ್ತು ಪ್ರದರ್ಶನದ ವೇಳೆ ರಿವರ್ಸ್ ಪಲ್ಟಿ ಹೊಡೆಯುತ್ತಿದ್ದರು, ಈ ವೇಳೆ ಅವರು ಆಯತಪ್ಪಿ ಬಿದ್ದು ಗಂಭೀರ ಗಾಯಗಳಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ರಿವರ್ಸ್ ಪಲ್ಟಿ ಹೊಡೆಯುವ ವೇಳೆ ತಲೆ ನೆಲಕ್ಕೆ ಬಡಿದು ಕತ್ತು ಉಳುಕಿದ ಪರಿಣಾಮ ಹುಲಿವೇಷಧಾರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

