HomeLatest Newsತಿರುಪತಿ ತಿಮ್ಮಪ್ಪನ ಹುಂಡಿಗೆ ಒಂದೇ ದಿನ ದಾಖಲೆಯ 5.3 ಕೋಟಿ ರೂ. ಕಾಣಿಕೆ

ತಿರುಪತಿ ತಿಮ್ಮಪ್ಪನ ಹುಂಡಿಗೆ ಒಂದೇ ದಿನ ದಾಖಲೆಯ 5.3 ಕೋಟಿ ರೂ. ಕಾಣಿಕೆ

ತಿರುಪತಿ: ತಿರುಪತಿ ತಿಮ್ಮಪ್ಪನ ಹುಂಡಿಯಲ್ಲಿ ಒಂದೇ ದಿನ 5.3 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಇದು ಕಳೆದೊಂದು ವರ್ಷದ ದಿನದಲ್ಲಿ ಸಂಗ್ರಹವಾದ ಅತ್ಯಧಿಕ ಮೊತ್ತವಾಗಿದೆ.

ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಸೋಮವಾರ ಒಂದೇ ದಿನ 78,730 ಭಕ್ತರು ಭೇಟಿ ನೀಡಿದ್ದಾರೆ. ಹಬ್ಬ ಮತ್ತು ರಜಾ ದಿನಗಳಲ್ಲಿ ಭೇಟಿ ನೀಡುವ ಭಕ್ತರ ಸಂಖ್ಯೆಗಿಂತ ಇದು ಕಡಿಮೆಯಾಗಿದ್ದರೂ, ಒಂದೇ ದಿನ 5.3 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

2023ರ ಜನವರಿ 2ರಂದು ತಿರುಮಲದಲ್ಲಿ ಒಂದೇ ದಿನ 7.7 ಕೋಟಿ ರೂ. ಕಾಣಿಕೆ ಸಂಗ್ರಹವಾಗಿ ದಾಖಲೆ ಬರೆದಿತ್ತು. ಹಲವು ಸಲ ತಿರುಪತಿಯಲ್ಲಿ ಒಂದು ದಿನಕ್ಕೆ 6 ಕೋಟಿ ರೂ.ಗಿಂತಲೂ ಅಧಿಕ ಕಾಣಿಕೆ ಬಂದ ನಿದರ್ಶನಗಳಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular