HomeLatest NewsBREAKING : 'ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ' : ವೃದ್ದೆಯನ್ನು ಉಸಿರುಗಟ್ಟಿಸಿ ಕೊಂದು 73 ಗ್ರಾಂ...

BREAKING : ‘ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ’ : ವೃದ್ದೆಯನ್ನು ಉಸಿರುಗಟ್ಟಿಸಿ ಕೊಂದು 73 ಗ್ರಾಂ ಚಿನ್ನಾಭರಣ ದರೋಡೆ.!

ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿಯಲ್ಲಿ ಜನರನ್ನು ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದೆ. ಮನೆಯಲ್ಲಿ ಒಂಟಿಯಾಗಿದ್ದ ಕಮಲಮ್ಮ (64) ಎಂಬ ವೃದ್ಧೆಯನ್ನು ಕಿರಾತಕರು ಉಸಿರುಗಟ್ಟಿಸಿ ಕೊಲೆ ಮಾಡಿ, ಅವರ ಬಳಿಯಿದ್ದ ಸುಮಾರು 73 ಗ್ರಾಂ ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

ಘಟನೆಯ ಹಿನ್ನೆಲೆ
ಕೊಲೆಯಾದ ವೃದ್ದೆಯನ್ನು ಕೊಲ್ಲಾರಿ ಕಮಲಮ್ಮ (64) ಎಂದು ಗುರುತಿಸಲಾಗಿದೆ. ಮೃತ ಕಮಲಮ್ಮ ಅವರು ನ್ಯಾಮತಿಯಲ್ಲಿ ಒಂಟಿಯಾಗಿ ವಾಸವಾಗಿದ್ದರು. ರಾತ್ರಿ ವೃದ್ಧೆ ಮಲಗಿದ್ದ ಸಮಯದಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಅವರು ಕೂಗಾಡದಂತೆ ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಳಿಕ ವೃದ್ಧೆಯ ಮೈಮೇಲಿದ್ದ ಚಿನ್ನದ ಸರ, ಕಿವಿಯೋಲೆ, ಉಂಗುರ ಸೇರಿದಂತೆ ಒಟ್ಟು 73 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿದ್ದಾರೆ.

ಸ್ಥಳಕ್ಕೆ ಪೊಲೀಸರ ಭೇಟಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಷಯ ತಿಳಿಯುತ್ತಿದ್ದಂತೆಯೇ ನ್ಯಾಮತಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.. ಒಂಟಿ ವೃದ್ಧೆಯನ್ನೇ ಗುರಿಯಾಗಿಸಿಕೊಂಡು ನಡೆದ ಈ ದರೋಡೆ ಮತ್ತು ಕೊಲೆ ಪ್ರಕರಣವು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular