SHOCKING : ದೇಶದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಶಿಕ್ಷಕರಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್.!

ದೇಶದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಶಿಕ್ಷಕರೇ ಸೇರಿಕೊಂಡು ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿದ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರು ಶಿಕ್ಷಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಅಪ್ರಾಪ್ತ ಬಾಲಕಿಗೆ ಪಾಠ ಹೇಳಿಕೊಡುವ ನೆಪದಲ್ಲಿ ಹೇಯ ಕೃತ್ಯ ಎಸಗಿದ್ದಾರೆ. . ನಾಲ್ಕನೇ ಆರೋಪಿ ಅರಣ್ಯ ಇಲಾಖೆ ಉದ್ಯೋಗಿ ಎಂದು ಹೇಳಲಾಗಿದೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ನವೆಂಬರ್ 15ರಂದು ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಶಿಕ್ಷಕನು ಮೋಸದಿಂದ ಹುಡುಗಿಯನ್ನು ತನ್ನ ಮನೆಗೆ ಕರೆದೊಯ್ದನು. ಇತರ ಆರೋಪಿಗಳು ಆಗಲೇ ಮನೆಯಲ್ಲಿದ್ದರು. ಬಳಿಕ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಡಿಯೀ ಮಾಡಿಕೊಂಡಿದ್ದಾರೆ. ಇದಾದ ಬಳಿಕ ನ.22 ರಂದು ಮತ್ತೆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಲಾಗಿದೆ.

ನ.22 ರಂದು ಆರೋಪಿ ಶಿಕ್ಷಕ ಬಾಲಕಿಯನ್ನು ಬಲವಂತವಾಗಿ ತನ್ನ ಬೈಕಿನಲ್ಲಿ ಕೂರಿಸಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಹಾಗೂ ಎಲ್ಲಾ ಆರೋಪಿಗಳು ಸೇರಿಕೊಂಡು ಮತ್ತೆ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯ ಗಂಭೀರತೆಯನ್ನು ಗಮನಿಸಿದ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಮೋಹನ್ ಸಿಂಗ್ ಅವರಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಎಲ್ಲಾ ಆರೋಪಿಗಳು ಪೊಲೀಸರ ವಿಚಾರಣೆಯ ಸಮಯದಲ್ಲಿ ತಮ್ಮ ಅಪರಾಧವನ್ನು ಒಪ್ಪಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read