HomeCrimeನೋಡಲು ತನ್ನಂತೆ ಇಲ್ಲವೆಂದು ಪುತ್ರನನ್ನೇ ಕೊಂದ ಪಾಪಿ ತಂದೆ

ನೋಡಲು ತನ್ನಂತೆ ಇಲ್ಲವೆಂದು ಪುತ್ರನನ್ನೇ ಕೊಂದ ಪಾಪಿ ತಂದೆ

ವಿಜಯಪುರ: ನೋಡಲು ತನ್ನಂತೆ ಇಲ್ಲವೆಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ 6 ವರ್ಷದ ಮಗನನ್ನು ಕೊಲೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ನಾಗಠಾಣ ಗ್ರಾಮದಲ್ಲಿ ನಡೆದಿದೆ.

ಸಿದ್ದಾರ್ಥ್ ಅರಕೇರಿ ಕೊಲೆಯಾದ ಬಾಲಕ. ತಂದೆ ಮಲ್ಲಿಕಾರ್ಜುನ ಅರಕೇರಿ ಪುತ್ರನನ್ನೇ ಕೊಲೆ ಮಾಡಿದ್ದಾನೆ. ಕಳೆದ ಮಾರ್ಚ್ 16ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೃಷ್ಣಾ ನದಿಗೆ ತಳ್ಳಿ ಮಗ ಸಿದ್ಧಾರ್ಥ್ ನನ್ನು ಕೊಲೆ ಮಾಡಿದ್ದಾನೆ.

ಪುತ್ರ ಸಿದ್ದಾರ್ಥ್ ನೋಡಲು ನಿನ್ನಂತಿಲ್ಲ ಎಂದು ಗ್ರಾಮದಲ್ಲಿ ಕೆಲವರು ಚುಡಾಯಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿ ನದಿಗೆ ತಳ್ಳಿ ಕೊಲೆ ಮಾಡಿದ್ದಾನೆ. ಮಾರ್ಚ್ 16ರಂದು ಶಾಲೆಗೆ ಸೇರಿಸುವುದಾಗಿ ಮಗನನ್ನು ಕರೆದುಕೊಂಡು ಹೋಗಿ ಮಹಾರಾಷ್ಟ್ರದ ಕರಾಡ್ ಜಿಲ್ಲೆಯ ವಡೋಲಿ ಬಳಿ ಕೃಷ್ಣಾ ನದಿಗೆ ತಳ್ಳಿ ಕೊಲೆ ಮಾಡಿದ್ದಾನೆ. ನಂತರ ಸಿಂದಗಿ ಸಮೀಪ ಮಗನನ್ನು ಶಾಲೆಗೆ ಸೇರಿಸಿ ಹಾಸ್ಟೆಲ್ ನಲ್ಲಿ ಬಿಟ್ಟು ಬಂದಿರುವುದಾಗಿ ಕುಟುಂಬದವರಿಗೆ ಸುಳ್ಳು ಹೇಳಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 1ರಂದು ಮಗನ ಹುಟ್ಟುಹಬ್ಬದ ದಿನ ಕರೆದುಕೊಂಡು ಬರುವಂತೆ ತಾಯಿ ಭಾಗ್ಯಶ್ರೀ ಹಠ ಹಿಡಿದಿದ್ದಾರೆ. ಆಗ ಮನೆಯಿಂದ ಮಲ್ಲಿಕಾರ್ಜುನ ಓಡಿಹೋಗಿದ್ದಾನೆ. ಅನುಮಾನಗೊಂಡು ಪೊಲೀಸರಿಗೆ ಭಾಗ್ಯಶ್ರೀ ದೂರು ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪುತ್ರನನ್ನು ಕೊಲೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾನೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular