HomeKarnatakaSpandana Vijay Raghavendra : ಈಡಿಗ ಸಂಪ್ರದಾಯದಂತೆ ನಾಳೆ ಬೆಂಗಳೂರಿನಲ್ಲಿ ‘ಸ್ಪಂದನಾ’ ಅಂತ್ಯಕ್ರಿಯೆ

Spandana Vijay Raghavendra : ಈಡಿಗ ಸಂಪ್ರದಾಯದಂತೆ ನಾಳೆ ಬೆಂಗಳೂರಿನಲ್ಲಿ ‘ಸ್ಪಂದನಾ’ ಅಂತ್ಯಕ್ರಿಯೆ

ಬೆಂಗಳೂರು : ಥೈಲ್ಯಾಂಡ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟಂತಹ ನಟ ವಿಜಯ್ ರಾಘವೇಂದ್ರ ಪತ್ನಿ ‘ಸ್ಪಂದನಾ’ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದ್ದು, ಮೃತದೇಹ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದೆ.

ನಾಳೆ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಈಡಿಗ ಸಂಪ್ರದಾಯದಂತೆ ‘ಸ್ಪಂದನಾ’ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿದೆ. ನಾಳೆ ಮಧ್ಯಾಹ್ನದವರೆಗೆ ಸ್ಪಂದನಾ ಅಂತಿಮ ದರ್ಶನಕ್ಕೆ ಸಾರ್ವುಜನಿಕರಿಗೆ ಅವಕಾಶ ನೀಡಲಾಗಿದೆ. ಬಳಿಕ ನಾಳೆ ಸಂಜೆ ಶ್ರೀರಾಂಪುರದಲ್ಲಿ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

ಥೈಲ್ಯಾಂಡ್ ಪ್ರವಾಸದಲ್ಲಿದ್ದ ಸ್ಪಂದನಾಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕನ್ನಡ ಚಿತ್ರರಂಗದ ನಟ, ನಿರೂಪಕ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಸಾವಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಮಾಜಿ ಸಿಎಂ ಬಿಎಸ್ವೈ ಸೇರಿದಂತೆ ಹಲವು ಗಣ್ಯರು ಹಾಗೂ ಇಡೀ ಚಿತ್ರರಂಗವೇ ಕಂಬನಿ ಮಿಡಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular