ನೀರಿನ ಕಂದಾಯ ಕಟ್ಟಲು ಭಾನುವಾರ ವಿಶೇಷ ಕೌಂಟರ್ ಓಪನ್

ಶಿವಮೊಗ್ಗ : 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಮಾ.02 ರ ಭಾನುವಾರದಂದು ವಿಶೇಷ ವಸೂಲಾತಿ ಕೌಂಟರ್ಗಳನ್ನು ತರೆಯಲಾಗಿದೆ.

ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗಾಗಿ ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ವಿನೋಬನಗರ 100 ಅಡಿ ರಸ್ತೆ ಇಂದಿರಾನಗರ ಬಡಾವಣೆ ಐ.ಜಿ.ಸರ್ಕಲ್ ಹತ್ತಿರ, ಹೊಸಮನೆ ಚರ್ಚ್ ಮುಂಭಾಗ, ಜಯನಗರ ಸರ್ವೋದಯ ಶಾಲೆ, ಬಿ.ಹೆಚ್.ರಸ್ತೆ ಸಹ್ಯಾದ್ರಿ ಕಾಲೇಜಿನ ಗೇಟ್ ನಂ. 1ರ ಎದುರು, ಸ್ವಾಮಿ ವಿವೇಕಾನಂದ ಬಡಾವಣೆ ಗುಡ್ಲಕ್ ಸರ್ಕಲ್ ಹತ್ತಿರ ವಿಶೇಷ ವಸೂಲಾತಿ ಕೌಂಟರ್ ತೆರೆದಿದ್ದು, ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read