HomeEntertainmentಕನ್ನಡಿಗರ ಮನ ಗೆದ್ದ 'ರಂಗನಾಯಕ'

ಕನ್ನಡಿಗರ ಮನ ಗೆದ್ದ ‘ರಂಗನಾಯಕ’

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ | udayavani

ಮಾರ್ಚ್ ಎಂಟು ಶಿವರಾತ್ರಿ ದಿನದಂದು  ಬಿಡುಗಡೆಯಾಗಿದ್ದ ನವರಸ ನಾಯಕ ಜಗ್ಗೇಶ್ ಅಭಿನಯದ ‘ರಂಗನಾಯಕ’ ಚಿತ್ರ ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದಲ್ಲಿ ಹಾಸ್ಯದ ಜೊತೆಗೆ ಕನ್ನಡದ ಕುರಿತು ನೀಡಿರುವ ಸಂದೇಶ ಸಿನಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಚಿತ್ರವನ್ನು ಗುರುಪ್ರಸಾದ್ ನಿರ್ದೇಶಿಸಿದ್ದು, ವಿಕ್ಯಾತ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಎಆರ್ ವಿಕ್ಯಾತ್ ನಿರ್ಮಾಣ ಮಾಡಿದ್ದಾರೆ. ಗುರುಪ್ರಸಾದ್ ಮತ್ತು ಜಗ್ಗೇಶ್ ಕಾಂಬಿನೇಷನಲ್ಲಿ ಮೂಡಿ ಬಂದಿದ್ದ ‘ಮಠ’ ಮತ್ತು ‘ಎದ್ದೇಳು ಮಂಜುನಾಥ’ ಸಿನಿಮಾಗಳು ಸ್ಯಾಂಡಲ್ ವುಡ್ ನಲ್ಲಿ ಹೊಸ ದಾಖಲೆ ಬರೆದಿದ್ದವು. ಇದೀಗ ಸುಮಾರು ವರ್ಷಗಳ ಬಳಿಕ ಈ ಜೋಡಿ ಮತ್ತೊಮ್ಮೆ ಒಂದಾಗಿದೆ.  ನವರಸ ನಾಯಕ ಜಗ್ಗೇಶ್ ಗೆ ಜೋಡಿಯಾಗಿ ರಚಿತಾ ಮಹಾಲಕ್ಷ್ಮಿ ಅಭಿನಯಿಸಿದ್ದು, ಉಮೇಶ್ ಆರ್ ಬಿ ಸಂಕಲನ, ಸಾಮ್ರಾಟ್ ಅಶೋಕ್ ಗೌತಮ್ ಛಾಯಾಗ್ರಹಣವಿದೆ. ಅನುಪ್ ಸೀಳಿನ್ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular