
ಮೃತಳನ್ನು ಮಾನ್ಯ (19) ಎಂದು ಗುರುತಿಸಲಾಗಿದೆ . ಎಂಜಿನಿಯರಿಂಗ್ ಪದವಿ ಓದುತ್ತಿದ್ದ ಈಕೆ ಪರೀಕ್ಷೆ ಸಮಯದಲ್ಲಿ ನಕಲು ಮಾಡಿದ್ದಳು ಎನ್ನಲಾಗಿದೆ. ಆದರೆ ಕಾಲೇಜು ಪ್ರಾಂಶುಪಾಲರಿಗೆ ಕ್ಷಮಾಪಣೆ ಪತ್ರ ಬರೆದುಕೊಡುವಂತೆ ಉಪನ್ಯಾಸಕರೊಬ್ಬರು ಹೇಳಿದ್ದರು.
ಇದರಿಂದ ನೊಂದ ವಿದ್ಯಾರ್ಥಿನಿ ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

