BREAKING : ರಾಯಚೂರಿನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ರಾಯಚೂರು : ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಯಚೂರಿನ ಕೊತ್ತದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಮೃತನನ್ನು ಮಲ್ಲೇಶ್ (18) ಎಂದು ಗುರುತಿಸಲಾಗಿದೆ. ರಾಯಚೂರು ನಗರದ ಎಸ್ ಆರ್ ಪಿ ಎಸ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಈತ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬರುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಬಾಲಕ ಮೃತಪಟ್ಟಿದ್ದಾನೆ.

ಟ್ರ್ಯಾಕ್ಟರ್ ಅಕ್ರಮ ಮರಳನ್ನು ತುಂಬಿಸಿಕೊಂಡು ಇಡಪನೂರು ಕಡೆಯಿಂದ ರಾಯಚೂರು ನಗರಕ್ಕೆ ಹೊರಟಿತ್ತು. ಘಟನೆ ಬಳಿಕ ಚಾಲಕ ಆರೋಪಿ ನಾಗರಾಜ್ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read